Песня Ivanu Geleyanalla (From ''Mungaru Male'') (Shreya Ghoshal - Soothing - Kannada Hits (2016)) в исполнении Shreya Ghoshal - слушать онлайн в хорошем качестве или скачать трек в Mp3 бесплатно на ПК или телефон.
Текст песни Shreya Ghoshal - Ivanu Geleyanalla (From ''Mungaru Male'') (Shreya Ghoshal - Soothing - Kannada Hits (2016))
ಇವನು ಗೆಳೆಯನಲ್ಲ, ಗೆಳತಿ ನಾನು ಮೊದಲೇ ಅಲ್ಲ
ಇವನು ಇನಿಯನಲ್ಲ
ತುಂಬಾ ಸನಿಹ ಬಂದಿಹನಲ್ಲ
ನೋವಿನಲ್ಲೂ ನಗುತಿಹನಲ್ಲ, ಯಾಕೆ ಈ ಥರಾ?
ಜಾಣ ಮನವೇ ಕೇಳು ಜಾರಬೇಡ ಇವನ ಕಡೆಗೆ
ಯಾಕೆ ನಿನಗೆ ಸಲ್ಲದ ಸಲಿಗೆ, ಇರಲಿ ಅಂತರ
ಇವನು ಗೆಳೆಯನಲ್ಲ, ಗೆಳತಿ ನಾನು ಮೊದಲೇ ಅಲ್ಲ
ಒಲವ ಹಾದಿಯಲ್ಲಿ ಇವನು ನನಗೆ ಹೂವೋ ಮುಳ್ಳೋ
ಮನದ ಕಡಲಿನಲ್ಲಿ ಇವನು ಅಲೆಯೋ ಭೀಕರ ಸುಳಿಯೋ
ಅರಿಯದಂಥ ಹೊಸ ಕಂಪನವೋ ಯಾಕೋ ಕಾಣೆನೊ
ಅರಿತೋ ಮರೆತೋ ಜೀವ ವಾಲದಂತೆ ಇವನ ಕಡೆಗೆ
ಸೋಲದಂತೆ ಕಾಯೇ ಮನವೆ ಉಳಿಸು ನನ್ನನು
ಇವನು ಗೆಳೆಯನಲ್ಲ, ತುಂಬ ಸನಿಹ ಬಂದಿಹನಲ್ಲ
ತಿಳಿದು ತಿಳಿದು ಇವನು ತನ್ನ ತಾನೇ ಸುಡುತಿಹನಲ್ಲ
ಒಲುಮೆ ಎಂಬ ಸುಳಿಗೆ ಈಜು ಬರದೆ ಇಳಿದಿಹನಲ್ಲ
ಸಾವಿನಲ್ಲೂ ನಗುವುದ ಬಲ್ಲ ಏನೋ ಕಳವಳ
ಮುಳುಗುವವನ ಕೂಗು ಚಾಚುವಂತೆ ಮಾಡಿದೆ ಕೈಯ್ಯ
ಜಾರಿ ಬಿಡುವುದೇ ಈ ಹೃದಯ ಏನೋ ತಳಮಳ
ಇವನು ಗೆಳೆಯನಲ್ಲ, ತುಂಬ ಸನಿಹ ಬಂದಿಹನಲ್ಲ